ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,31,2025 (www.justkannada.in): ರಾಜ್ಯದಲ್ಲಿ ಹಾಲು, ವಿದ್ಯುತ್ ಸೇರಿ ಇತರೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ , ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಏಪ್ರಿಲ್ 5ರಿಂದ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿಯೂ ಧರಣಿ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆ ಮೂಲಕ ಜನತೆಗೆ ದುಬಾರಿ ಜೀವನ ನಡೆಸುವ ದುಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಂದಿದೆ. ಗಾಳಿಯನ್ನು ಬಿಟ್ಟು ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುವುದು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: protest, against, government, condemn, price hike, BY Vijayendra