ದಾವಣಗೆರೆ,ಫೆಬ್ರವರಿ,14,2025 (www.justkannada.in): ಪಕ್ಷದ ಕೆಲ ನಾಯಕರ ವಿರುದ್ದ ತೊಡೆತಟ್ಟಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ್ದು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಶಾಸಕ ಬಸನಗೌಡ ಯತ್ನಾಳ್ ಗೆ ನೋಟಿಸ್ ಕೊಟ್ಟಿರೋದು ನಾನಲ್ಲ. ಕೇಂದ್ರ ಬಿಜೆಪಿ ಶಿಸ್ತು ಸಮಿತಿ. ಯತ್ನಾಳ್ ಉಚ್ಚಾಟನೆ ಬಗ್ಗೆ ಏನು ಹೇಳಲ್ಲ ಎಂದರು.
ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಎಲ್ಲಾ ಸಮಸ್ಯೆಗಳು ಬಗೆಹರಿಸುವ ಲಕ್ಷಣಗಳು ಕಾಣಿತ್ತಿದೆ. ಎಲ್ಲರಿಗೂ ಒಳ್ಳೆಯದಾಗುತ್ತೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
Key words: Notice, MLA, Yatnal, BJP, BY Vijayendra