ಬೆಂಗಳೂರು,ನವೆಂಬರ್,19,2020(www.justkannada.in): ಸಚಿವ ಸಂಪುಟ ವಿಸ್ತರಣೆ ಸಂಬಂಧ ನಿನ್ನೆಯಷ್ಟೇ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರಿಗೆ ಸಚಿವಾಕಾಂಕ್ಷಿಗಳ ಪಟ್ಟಿ ನೀಡಿ ವಾಪಸ್ ಆಗಿದ್ದು, ಮುಂದಿನ ಮೂರ್ನಾಲ್ಕು ದಿನದೊಳಗೆ ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ.
ಈ ಮಧ್ಯೆ ಮತ್ತೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆಯಾ ಎಂಬ ಪ್ರಶ್ನೆ ಮೂಡಿದೆ ಹೌದು, ಅತ್ತ ನವೆಂಬರ್ 24 ಕ್ಕೆ ಗ್ರಾ.ಪಂ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಗ್ರಾಮ ಪಂಚಾಯತಿ ಚುನಾವಣಾ ಘೋಷಣೆ ದಿನಾಂಕದೊಳಗೆ ಸಂಪುಟ ವಿಸ್ತರಣೆಯಾಗದಿದ್ದರೆ ಮತ್ತೆ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.
ಗ್ರಾ.ಪಂ ಚುನಾವಣೆ ಮೇಲೆ ಸಚಿವ ಸಂಪುಟ ವಿಸ್ತರಣೆ ಪರಿಣಾಮ ಬೀರಲಿದ್ದು, ತಳ ಮಟ್ಟದ ಕಾರ್ಯಕರ್ತರಲ್ಲೂ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಶಾಸಕರು ಸಚಿವ ಸಂಪುಟದೊಳಗೆ ಸೇರುವ ಲೆಕ್ಕಚಾರದೊಂದಿಗೆ ತಮ್ಮ ಕ್ಷೇತ್ರಗಳಲ್ಲಿ ಚುನಾವಣಾ ಪ್ಲ್ಯಾನ್ ರಚಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಿನ್ನಲೆ ಈಗಾಗಲೇ ಸಂಪುಟ ಸಂಭವನೀಯರ ಪಟ್ಟಿ ದೆಹಲಿ ವರಿಷ್ಠ ಕೈ ಸೇರಿದ್ದು, ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಬಾರಿ ಲಾಬಿ ನಡೆಸುತ್ತಿದ್ದಾರೆ. ಇತ್ತ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಸೂಚನೆಗೆ ಯಡಿಯೂರಪ್ಪ ಕಾಯುತ್ತಿದ್ದಾರೆ. ಹೀಗಾಗಿ ಸಂಪುಟ ಪುನರ್ ರಚನನೆಯೊ ? ವಿಸ್ತರಾಣೆಯೋ ಎಂಬುದು ಇನ್ನೂ ನಿಗೂಢವಾಗಿದ್ದು ಸಚಿವಾಕಾಂಕ್ಷಿಗಳ ಎದೆಯಲ್ಲಿ ಡವಡವ ಶುರುವಾಗಿದೆ.
Key words: Cabinet –Circus-Postponement – Cabinet expansion- again.