ಬೆಳಗಾವಿ,ಜ,29,2020(www.justkannada.in): ರಾಜ್ಯದಲ್ಲಿ ಹೊಸ ಡಿಸಿಎಂ ಹುದ್ದೆ ಸೃಷ್ಟಿ ಮಾಡಲಾಗುವುದಿಲ್ಲ. ಈಗಿರುವ ಮೂವರು ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುತ್ತಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ನಾಳೆ ದೆಹಲಿಗೆ ಹೋಗುತ್ತೇನೆ. ದೆಹಲಿಯಲ್ಲಿ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷರನ್ನ ಭೇಟಿಯಾಗಿ ಚರ್ಚಿಸುತ್ತೇನೆ. ರಾಜ್ಯದಲ್ಲಿ ಹೊಸ ಡಿಸಿಎಂ ಹುದ್ದೆ ಸೃಷ್ಠಿಸಲ್ಲ. ಈಗಿರುವವರೇ ಮುಂದುವರೆಯುತ್ತಾರೆ ಎಂದು ತಿಳಿಸಿದರು.
ಹಾಗೆಯೇ ಸಂಪುಟದಿಂದ ಸಚಿವರನ್ನ ಕೈ ಬಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ,, ಎಲ್ಲವನ್ನು ವರಿಷ್ಠರ ಜತೆ ಚರ್ಚಿಸಿದ ಬಳಿಕ ನಿರ್ಧಾರ ಮಾಡುತ್ತೇವೆ. ಉಪಚುನಾವಣೆಯಲ್ಲಿ ಗೆದ್ದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಗೆದ್ದ ಮೂವರು ಸಚಿವರಾಗುತ್ತಾರೆ. ಇವರ ಜತೆ ಉಮೇಶ್ ಕತ್ತಿ ಸಹ ಸಚಿವರಾಗ್ತಾರೆ ಎಂದು ಸಿಎಂ ಬಿಎಸ್ ವೈ ಮಾಹಿತಿ ನೀಡಿದರು.
ಇನ್ನು ಬೆಳಗಾವಿಯಲ್ಲಿ ನೆರೆ ಪ್ರವಾಹದಿಂದ ಹೆಚ್ಚಿನ ಹಾನಿ ಉಂಟಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಲಾಗುತ್ತದೆ ಎಂದು ಸಿಎಂ ಬಿಎಸ್ ವೈ ಹೇಳಿದರು.
Key words: cabinet expansion- Delhi -tomorrow – discuss – CM BS Yeddyurappa