ಬೆಂಗಳೂರು,ನವೆಂಬರ್,17,2020(www.justkannada.in): ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಳಿಕ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ ಚರ್ಚೆಗೆ ಬಂದಿದ್ದು, ಮಂತ್ರಿಗಿರಿ ಒಲಿಸಿಕೊಳ್ಳಲು ಹಲವು ಬಿಜೆಪಿ ಶಾಸಕರು ಲಾಬಿ ನಡೆಸುತ್ತಿದ್ದಾರೆ.
ಈ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪ ನಾಳೆ ನವದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಬೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ನಾಯಕರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ ಮಾಡುವ ಸಾಧ್ಯತೆ ಇದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಗೆ ಸಿಎಂ ಬಿಎಸ್ ವೈ ಪ್ರಯಾಣ ಬೆಳೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ 11.30ಕ್ಕೆ ನಿಗದಿಯಾಗಿದ್ಧ ಸಚಿವ ಸಂಪುಟ ಸಭೆಯನ್ನ 10.30ಕ್ಕೆ ನಿಗದಿ ಮಾಡಲಾಗಿದೆ.
ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಡಿ ನಡ್ಡಾ ಹಾಗೂ ಪಕ್ಷದ ಕೇಂದ್ರೀಯ ನಾಯಕರೊಂದಿಗೆ ಚರ್ಚೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದರಲ್ಲಿ ಕೇಂದ್ರ ನಾಯಕರು ಬ್ಯುಸಿಯಾಗಿದ್ದರು. ಈ ಹಿನ್ನೆಲೆ ಕೇಂದ್ರೀಯ ನಾಯಕರು ಯಾವಾಗ ಭೇಟಿಗೆ ದಿನಾಂಕ ನೀಡಲಿದ್ದಾರೆಂದು ಯಡಿಯೂರಪ್ಪ ಅವರು ಕಾದು ಕುಳಿತಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಹಾಯ ಮಾಡಿದ್ದ ಎಂಎಲ್ಸಿಗಳಾದ ಎಂಟಿಬಿ ನಾಗರಾಜ್, ಹೆಚ್ ವಿಶ್ವನಾಥ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ. ಹಾಗೆಯೇ ಆರ್.ಆರ್ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮುನಿರತ್ನ ಅವರಿಗೂ ಸಚಿವ ಸ್ಥಾನ ನೀಡುವುದಾಗಿ ಸಿಎಂ ಬಿಎಸ್ ವೈ ಈಗಾಗಲೇ ಘೋಷಣೆ ಮಾಡಿದ್ದಾರೆ.
Key words: Cabinet- expansion –issue- Tomorrow- CM BS Yeddyurappa -Delhi.