ಬೆಂಗಳೂರು,ಜು,30,2019(www.justkannada.in): ತಮ್ಮ ಸರ್ಕಾರದ ಅವಧಿಯಲ್ಲಿ ಆಚರಣೆಗೆ ತರಲಾಗಿದ್ದ ಟಿಪ್ಪು ಜಯಂತಿಯನ್ನ ರದ್ದು ಮಾಡಿದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಟಿಪ್ಪು ಜಯಂತಿ ಆಚರಣೆ ರದ್ಧು ಮಾಡಿದ್ದು ಅಪರಾಧ. ರಾಜ್ಯ ಬಿಜೆಪಿ ಸರ್ಕಾರದ ಆದೇಶಕ್ಕೆ ನನ್ನ ವಿರೋಧವಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಇಂದು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ್ ಒಬ್ಬ ಅಲ್ಪಸಂಖ್ಯಾತರಷ್ಟೇ ಅಲ್ಲ. ಮೈಸೂರು ರಾಜ್ಯದ ಸುಲ್ತಾನರಾಗಿದ್ದವರು. ಬ್ರಿಟೀಷರ ವಿರುದ್ದ ಹೋರಾಡಿದ್ದ ಸ್ವತಂತ್ರ ಪ್ರೇಮಿ. ಮೈಸೂರು ಅಭಿವೃದ್ಧಿಗೆ ಶ್ರಮಿಸಿದ್ದವರು. ಕೆ.ಆರ್ ಎಸ್ ಗೆ ಫೌಂಡೇಷನ್ ಹಾಕಿಸಿದ್ದೇ ಟಿಪ್ಪು ಸುಲ್ತಾನ್. ಹೀಗಾಗಿ ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ ಎಂದು ಹರಿಹಾಯ್ದರು.
ಹಾಗೆಯೇ ಅಲ್ಪಸಂಖ್ಯಾತ ದ್ವೇಷದಿಂದ ಬಿಜೆಪಿ ಈ ರೀತಿ ಮಾಡಿದೆ. ಬಿಜೆಪಿ ದುರುದ್ದೇಶದಿಂದ ಟಿಪ್ಪು ಜಯಂತಿ ರದ್ದು ಮಾಡಿದೆ ಎಂದು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ಗುಡುಗಿದರು.
Key words: Cancel -Tippu Jayanthi- celebration– former CM -Siddaramaiah – BJP government.