ನವದೆಹಲಿ, ಜುಲೈ 05, 2020 (www.justkannada.in): ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುತ್ತದೆ.
ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು.
ಕೊರೋನಾ ಲಾಕ್ಡೌನ್ ಕಾರಣದಿಂದ ಜುಲೈಗೆ ಮುಂದೂಡಲಾಗಿತ್ತು. ಜುಲೈ 29 ರಿಂದ ಆಗಸ್ಟ್ 16 ರ ನಡುವೆ ಪರೀಕ್ಷೆ ನಡೆಸಲು ಯೋಜನೆ ನಡೆಸಲಾಗಿತ್ತು. ಆದರೆ, ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮೇ 2020 ರ ಸಿಎ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.