ವಿಜಯಪುರ,ಡಿ,28,2019(www.justkannada.in): ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚನೆ ನೀಡಿದರು.
ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಅಣೆಕಟ್ಟಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ನೀರಿನ ಮಟ್ಟವನ್ನು ಪರಿಶೀಲಿಸಿದರು. ಪ್ರಸ್ತುತವಾಗಿ ಆಲಮಟ್ಟಿ ಡ್ಯಾಮಿನಲ್ಲಿ 107ಟಿಎಂಸಿ ಹಾಗೂ ನಾರಾಯಣ ಪುರ ಡ್ಯಾಮಿನಲ್ಲಿ 30 ಟಿಎಂಸಿ ನೀರು ಸಂಗ್ರಹವಾಗವಾಗಿದೆ. ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಿದಂತೆ ವಾರ ಬಂದಿಯಂತೆ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರು ಸರಬರಾಜಿಗೆ ಬಿಡುಗಡೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹಾಗೆಯೇ ನೀರು ಪೋಲಾಗಬಾರದು ಮತ್ತು ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಿನಿಂದಲೇ ಎಚ್ಚರಿಕೆ ವಹಿಸಿದರೆ ಬೇಸಿಗೆಯಲ್ಲಿ ನೀರಿನ ಅಭಾವವನ್ನು ನಿಭಾಯಿಸಬಹುದಾಗಿದೆ. ಈ ನಿಟ್ಟಿನಲ್ಲಿ ಎಚ್ವರಿಕೆ ವಹಿಸುವಂತೆ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಸೂಚಿದರು. ಕೆಬಿಜೆಎನ್ ಎಲ್ ಅಣೆಕಟ್ಟು ವಲಯದ ಮುಖ್ಯ ಅಭಿಯಂತರ ಆರ್. ಪಿ. ಕುಲಕರ್ಣಿ ಉಪಸ್ಥಿತರಿದ್ದರು.
Key words: careful -drinking water – summer-DCM -Govinda Karajola-alamatti dam