ಬೀದರ್,ಏಪ್ರಿಲ್,14,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಹೂಡಿರುವ ಅನಿರ್ಧಿಷ್ಟಾವಧಿ ಮುಷ್ಕರ 8ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಕರ್ತವ್ಯಕ್ಕೆ ಹಾಜರಾಗುವವರಿಗೆ ಅಡ್ಡಿಪಡಿಸುವವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಲಾಗುವುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಇಂದು ಬೀದರ್ ನ ಹುಮ್ನಾಬಾದ್ ನಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಹಬ್ಬದ ಬಳಿಕ ಮತ್ತಷ್ಟು ಚಾಲಕರು ಕರ್ತವ್ಯಕ್ಕೆ ಬಂದಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವವರಿಗೆ ಅಡ್ಡಿಪಡಿಸುವ ಕೆಲಸವಾಗುತ್ತಿದೆ. ಅಡ್ಡಿಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತದೆ ಎಂದು ಹೇಳಿದರು.
ಸಾರಿಗೆ ನೌಕರರ ಕುಟುಂಬಸ್ಥರಿಂದ ಪ್ರತಿಭಟನೆ ಕುರಿತು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಈ ಮೂಲಕ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ. ಇದು ಸಾಧ್ಯವಿಲ್ಲ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.
Key words: Case- against – disrupt -attendance – duty-DCM -Laxman Sawadi -warns.