ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು  8.41 ಕೋಟಿ ರೂ.ವಂಚನೆ; ಮಹಿಳೆ ವಿರುದ್ದ ಪ್ರಕರಣ ದಾಖಲು

ಬೆಂಗಳೂರು,ಡಿಸೆಂಬರ್,24,2024 (www.justkannada.in): ಮಾಜಿ ಸಂಸದ ಡಿ.ಕೆ ಸುರೇಶ್ ಅವರ  ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 8.41 ಕೋಟಿ ರೂ.ವಂಚನೆ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೆ ವಂಚನೆ ಮಾಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ.

ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ಎಂಬುವವರೇ ವಂಚನೆ ಮಾಡಿರುವುದು. ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್​ ಮಾಲೀಕರು ದೂರು ನೀಡಿದ್ದಾರೆ. ಚಂದ್ರ ಲೇಔಟ್ ನಿವಾಸಿ ಆಗಿರುವ ವನಿತಾ ಐತಾಳ್ ಅವರು ಐಶ್ವರ್ಯ ಗೌಡ ವಿರುದ್ಧ ದೂರು ನೀಡಿದ್ದಾರೆ.

ಐಶ್ವರ್ಯ ಗೌಡ 2023ರ ಅಕ್ಟೋಬರ್​ನಿಂದ 2024 ಏಪ್ರಿಲ್ ವರೆಗೆ ಹಂತ ಹಂತವಾಗಿ ಚಿನ್ನ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಐಶ್ವರ್ಯಳನ್ನ ಹಣ ಕೇಳಿದಾಗ ಡಿ ಕೆ ಸುರೇಶ್ ​ರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ ಎಂದು ಎಫ್‌ಐಆರ್​ನಲ್ಲಿ ದಾಖಲಾಗಿದೆ. ಅಲ್ಲದೆ ಸಿನಿಮಾ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಐಶ್ವರ್ಯ ಗೌಡ ಅವರ ಪತಿ‌ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿ ಬಂಧಿದ್ದು, ಈ ಬಗ್ಗೆ ಚಂದ್ರ ಲೇಔಟ್​ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಈ ಕುರಿತು ಎಫ್ ಐಆರ್ ದಾಖಲಾಗಿದೆ.

Key words: Case, woman, Rs 8.41 crore, fraud, Name DK Suresh’s sister