ನವದೆಹಲಿ,ಏಪ್ರಿಲ್,30,2025 (www.justkannada.in): ದೇಶದಲ್ಲಿ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಈ ಸಂಬಂಧ ಮಹತ್ವದ ಘೋಷಣೆ ಮಾಡಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿಎ. ಜನಗಣತಿ ವೇಳೆಯೇ ಜಾತಿಗಣತಿ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಕ್ಯಾಬಿನೆಟ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಜೊತೆಗೆ ಜಾತಿಗಣತಿ ಮಾಡುತ್ತೇವೆ. ಜಾತಿಗಣತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಆಡಳಿತವಿರುದ ರಾಜ್ಯಗಳಲ್ಲಿ ಅವೈಜ್ಞಾನಿಕ ಸಮೀಕ್ಷೆ ನಡೆಸಲಾಗಿದೆ. ಈ ಹಿಂದೆ ಜಾತಿಗಣತಿ ವಿಚಾರದಲ್ಲಿ ರಾಜಕೀಯ ಮಾಡಿದೆ. ಕೆಲ ಸರ್ಕಾರಗಳು ರಾಜಕೀಯ ಮಾಡಿವೆ. ಇದೀಗ ಕೇಂದ್ರ ಸರ್ಕಾರ ದೇಶದಲ್ಲಿ ಜನಗಣತಿ ಜೊತೆಗೆ ಜಾತಿಗಣತಿ ಸರ್ವೆ ಮಾಡಲಿದೆ ಎಂದರು.
Key words: caste census, country, central government, Decision