ಬೆಂಗಳೂರು,ಜೂ,25,2019(www.justkannada.in): ಇಂದು ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.
ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಕಾವೇರಿ ನಿರ್ವಹಣಾ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಪುದಿಚೇರಿ, ಕೇರಳಾ ರಾಜ್ಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತಮಿಳುನಾಡು ನೀರು ಬಿಡುವಂತೆ ಬೇಡಿಕೆ ಇಟ್ಟದ್ದು, ಹೀಗಾಗಿ ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ಜೂನ್ ತಿಂಗಳಲ್ಲಿ ಬಿಟ್ಟ ನೀರಿನ ಪ್ರಮಾಣ ಮತ್ತು ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣದ ಬಗ್ಗೆ ಚರ್ಚೆ ನಡೆಯಲಿದೆ.
ಕಳೆದ ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ನೀರುಬಿಡುಗಡೆ ಮಾಡುವಂತೆ ಪ್ರಾಧಿಕಾರದ ಮೇಲೆ ಒತ್ತಡ ಹೇರಿದ್ದ ಹಿನ್ನೆಲೆ ಈ ಸೂಚನೆ ನೀಡಿತ್ತು.
Key words: Cauvery -Water Management -Authority -meeting – Delhi today.