ಬೆಂಗಳೂರು,ಅಕ್ಟೋಬರ್,12,2023(www.justkannada.in): ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು ನಿನ್ನೆ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿ(CWRC) ಸಭೆಯಲ್ಲಿ ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶಿದೆ. ಈ ಆದೇಶ ಪರಿಶೀಲನೆಗಾಗಿ ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆ ನಡೆಯಲಿದೆ.
ನಾಳೆ ನವದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷ ಹಲ್ದಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ವರ್ಚುವಲ್ ಮೂಲಕ ನಡೆಯುವ ಈ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಪರಿಶೀಲಿಸಲಾಗುತ್ತದೆ. ಅ.16ರಿಂದ ಅ.31ರವರೆಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ನಿನ್ನೆ ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಆದೇಶಿಸಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ಬಹುತೇಕ ಜಲಾಶಯಗಳು ಭರ್ತಿಯಾಗಿಲ್ಲ. ಹೀಗಾಗಿ ರೈತರು, ಜನರು ತೊಂದರೆಗೆ ಸಿಲುಕಿದ್ದು ಕುಡಿಯುವ ನೀರಿಗೂ ಮುಂದೆ ಹಾಹಾಕಾರ ಉಂಟಾಗುವ ಸ್ಥಿತಿ ಬರುವ ಸಾಧ್ಯತೆ ಇದೆ.
Key words: Cauvery- Water -Management -Authority –meeting- tomorrow..