ಬೆಂಗಳೂರು,ಆಗಸ್ಟ್,23,2023(www.justkannada.in): ಕಾವೇರಿ ನದಿ ನೀರು ವಿಚಾರ ಸಂಬಂಧ ಸರ್ಕಾರ ರಾಜ್ಯದ ಜನರ ಹಿತ ಕಾಪಾಡುವ ಭರವಸೆ ನೀಡಿದೆ. ಜನರ ಹಿತಕ್ಕಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದು ಸಂತಸ ತಂದಿದ್ದು, ರಾಜ್ಯ ಸರ್ಕಾರ ನಮ್ಮ ರೈತರ ಹಿತರಕ್ಷಣೆ ಮಾಡಬೇಕು. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನೀರಾವರಿ ಮಂತ್ರಿಗಳು ರೈತರು ಅರ್ಜಿ ಹಾಕಲಿ ಎಂದಿದ್ದಾರೆ. ಈ ರೀತಿ ಮಾತನಾಡಿರುವುದು ಸರಿಯಲ್ಲ. ಈಗಾಗಲೇ ಸುಪ್ರೀಂಕೋರ್ಟ್ಗೆ ಸರ್ಕಾರ ಅರ್ಜಿ ಸಲ್ಲಿಸಿದೆ. ನಾವು ಯಾವ ರೀತಿ ವಾದ ಮಂಡಿಸಬೇಕೆಂಬ ಬಗ್ಗೆ ಚರ್ಚಿಸಿ. ನಾವು ರೈತರ ಪರವಾಗಿ ನಿಲ್ಲಬೇಕು ಎಂದರು.
ಸರ್ವಪಕ್ಷಗಳ ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್, ಡಿಕೆ, ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಹಲವು ಸಲಹೆಗಳನ್ನು ಕೊಟ್ಟಿದ್ದೇವೆ. ಸುಪ್ರೀಂಕೋರ್ಟ್ನಲ್ಲಿ ಪ್ರಬಲ ವಾದ ಮಂಡನೆಗೆ ಸಲಹೆ ಕೊಡಲಾಗಿದೆ ಎಂದರು.
Key words: cavery dispute-support – decision – benefit – people-Former CM -HD Kumaraswamy.