ಮಂಡ್ಯ,ಅಕ್ಟೋಬರ್,3,2023(www.justkannada.in): ಕಾವೇರಿ ನದಿ ವ್ಯಾಪ್ತಿಯಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾದ ಹಿನ್ನೆಲೆ ಇದೀಗ ಕೆಆರ್ ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಕೊಂಚ ಏರಿಕೆಯಾಗಿದೆ.
ಕೆಆರ್ಎಸ್ ಜಲಾಶಯಕ್ಕೆ 11,800 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೃಷ್ಣರಾಜಸಾಗರ ಜಲಾಶಯದ ಇಂದಿನ ನೀರಿನ ಮಟ್ಟ 99.54 ಅಡಿ ಇದೆ. ಕೆಆರ್ಎಸ್ ಜಲಾಶಯದ ಗರಿಷ್ಠಮಟ್ಟ 124.80 ಅಡಿ ಇದ್ದು, 11,800 ಕ್ಯೂಸೆಕ್ ಒಳಹರಿವಿದ್ದು, 1,592 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ಇನ್ನು ಅಕ್ಟೋಬರ್ 15ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.
Key words: cavery-River-Inflow – KRS Reservoir- increased