ನವದೆಹಲಿ,ಮೇ,17,2022(www.justkannada.in): ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಪಿ.ಚಿದಂಬರಂ ಅವರ ದೆಹಲಿ, ಮುಂಬೈ ಮತ್ತು ಚೆನ್ನೈ ನಿವಾಸಗಳು ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಹೊಸದಾಗಿ ಕೇಸ್ ದಾಖಲಿಸಿ ಸಿಬಿಐ ದಾಳಿ ನಡೆಸಿದ್ದು, ಕಾರ್ತಿ ಚಿದಂಬರಂ ನಿವಾಸದ ಮೇಲೂ ದಾಳಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. 2010-14ರ ಅವಧಿಯಲ್ಲಿ ಕಾರ್ತಿ ಚಿದಂಬರಂ ಭಾಗಿಯಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ.
ಕಾರ್ತಿ ಚಿದಂಬರಂ ತಂದೆ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಮಯದಲ್ಲಿ 305 ಕೋಟಿ ರೂ. ಮೊತ್ತದ ವಿದೇಶಿ ಹಣವನ್ನು ಸ್ವೀಕರಿಸುವುದಕ್ಕಾಗಿ ಐಎನ್ಎಕ್ಸ್ ಮೀಡಿಯಾಗೆ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ಅನುಮತಿ ನೀಡಿದ ಪ್ರಕರಣವು ಸೇರಿದೆ. ಇದೇ ಪ್ರಕರಣದಲ್ಲಿ ಹಿಂದೊಮ್ಮೆ ಕಾರ್ತಿ ಚಿದಂಬರಂ ಬಂಧನವಾಗಿದ್ದರು.
Key words: CBI- raids – former Union Minister -P Chidambaram-residences