ನವದೆಹಲಿ,ಅಕ್ಟೋಬರ್ 16,2023(www.justkannada.in): ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ತೆರವು ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ತರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತಡೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಸಿಎಂ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿದೆ. ವಿಚಾರಣೆಯನ್ನ ನವೆಂಬರ್ 7 ಕ್ಕೆ ಮುಂದೂಡಿದೆ.
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಹೈಕೋರ್ಟ್ ನ ಮಧ್ಯಂತರ ತಡೆ ತೆರವು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿದೆ.
Key words: CBI-Supreme Court -notice – DCM -DK Shivakumar.