ನವದೆಹಲಿ,ಫೆಬ್ರವರಿ,23,2022(www.justkannada.in): ಈ ವರ್ಷ ಸಿಬಿಎಸ್ ಇ, ಐಸಿಎಸ್ ಇ ಮತ್ತು ಇತರ ಹಲವು ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಗಳ ಆಫ್‌ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ಪೀಠ ಈ ಅರ್ಜಿಯನ್ನ ವಜಾಗೊಳಿಸಿದ್ದು, ಇದು ರೂಢಿಯಾಗಲು ಸಾಧ್ಯವಿಲ್ಲ. ಅಂತಹ ಅರ್ಜಿಗಳನ್ನು ಪರಿಗಣಿಸುವುದರಿಂದ ವ್ಯವಸ್ಥೆಯಲ್ಲಿ ಹೆಚ್ಚಿನ ಗೊಂದಲ ಉಂಟಾಗುತ್ತದೆ” ಎಂದು ನ್ಯಾಯಮೂರ್ತಿ ಹೇಳಿದರು. ಅಲ್ಲದೆ ವಿದ್ಯಾರ್ಥಿಗಳು ತಮ್ಮ ಕೆಲಸ ಮಾಡಲಿ ಮತ್ತು ಅಧಿಕಾರಿಗಳು ಅವರ ಕೆಲಸವನ್ನು ಮಾಡಲಿ” ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.
ಏಪ್ರಿಲ್ 26 ರಿಂದ 10ನೇ ತರಗತಿ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸಲು CBSE ನಿರ್ಧರಿಸಿದೆ ಎನ್ನಲಾಗಿದೆ.
Key words: CBSE-ICSE 10th , 12th class-exam-supreme court