ಶಿವಮೊಗ್ಗ,ಜನವರಿ,15,2021(www.justkannada.in): ಸಂಕ್ರಮಣ ಬಳಿಕ ಸಿಡಿ ಬ್ಲಾಸ್ಟ್ ಆಗುತ್ತದೆ ಎಂಬ ಹೇಳಿಕೆ ವಿಚಾರ: ಕುರಿತು ಬೇಸರ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ, ಬಹಿರಂಗ ಹೇಳಿಕೆ ನೀಡುವುದನ್ನ ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ. ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಇಂತಹ ಹೇಳಿಕೆಯಿಂದ ಬೇಸರವಾಗಿದೆ. ಕೂಡಲೇ ಇಂತಹ ಹೇಳಿಕೆ ನೀಡುವುದನ್ನ ನಿಲ್ಲಿಸಬೇಕು. ಬಹಿರಂಗ ಹೇಳಿಕೆ ಪಕ್ಷಕ್ಕೆ ಹಾನಿ ಮುಜುಗರವನ್ನುಂಟು ಮಾಡುತ್ತದೆ. ಇದನ್ನ ಹೈಕಮಾಂಡ್ ಗಂಭೀರವಾಗಿ ಪರಿಗಣಿಸುತ್ತದೆ ಎಂದರು.

ಬೇರೆ ಪಕ್ಷದಿಂದ ಬಂದವರಿಗೆ ಸ್ಥಾನಮಾನ ಅನಿವಾರ್ಯ. ಅವರು ಬರದಿದ್ದರೇ ಮಂತ್ರಿಯಾಗುತ್ತಿರಲಿಲ್ಲ. ಬಿಜೆಪಿ ವಿರೋಧ ಪಕ್ಷದಲ್ಲಿ ಕೂರುತ್ತಿತ್ತು ಎಂದು ಈಶ್ವರಪ್ಪ ಹೇಳಿದರು.
Key words: CD -Blast -After –sankrati- statement- Minister KS Eshwarappa …