ಬೆಂಗಳೂರು,ಮಾರ್ಚ್,29,2021(www.justkannada.in): ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣಾ ಪೊಲೀಸರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಮುಕ್ತಾಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ರಮೇಶ್ ಜಾರಕಿಹೊಳಿಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.
ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಹಾಗೂ ಎಸ್ ಐಟಿ ಅವರು ರಮೇಶ್ ಜಾರಕಿಹೊಳಿಯನ್ನು ಸುಮಾರು ನಾಲ್ಕೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು ಎನ್ನಲಾಗಿದೆ. ಈ ವೇಳೆ ಹಲವು ಪ್ರಶ್ನೆಗಳಿಗೆ ರಮೇಶ್ ಜಾರಕಿಹೊಳಿ ಉತ್ತರ ನೀಡಿದ್ದು, ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಲು ವಕೀಲರ ಜೊತೆ ಚರ್ಚಿಸುತ್ತೇನೆ. 4 ದಿನದ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು ಎನ್ನಲಾಗಿದೆ.
Key words: CD case-Former minister -Ramesh jarakiholi –hearing