ಬೆಂಗಳೂರು,ಮಾರ್ಚ್,29,2021(www.justkannada.in): ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನ ಬಂಧಿಸುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎದುರು ಜಮಾಯಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಆಗ್ರಹಿಸಿದರು. ಸಿಡಿ ರಮೇಶ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ನೂಕಾಟ ತಳ್ಳಾಟ ನಡೆದಿದ್ದು ಪ್ರತಿಭಟನಾನಿರತ ನಲಪಾಡ್ ಮತ್ತು ಕಾಮಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದರು.
Key words: CD Case- Ramesh jarakiholi -arrest demands-Youth Congress -protests