ಹುಬ್ಬಳ್ಳಿ,ಸೆಪ್ಟಂಬರ್,23,2023(www.justkannada.in): ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾವೇರಿ ನದಿ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ವಾದ ಮಂಡಿಸಿಲ್ಲ. ಸರ್ಕಾರ ನಮ್ಮ ಹಾಗೂ ತಮಿಳುನಾಡು ಡ್ಯಾಮ್ ಗಳ ಮಾಹಿತಿ ಪಡೆಯಬೇಕಿತ್ತು. ಆದರೆ ಸರ್ಕಾರ ಎರಡೂ ರಾಜ್ಯಗಳ ಡ್ಯಾಮ್ ಗಳ ಸ್ಥಿತಿ ಬಗ್ಗೆ ಸೂಕ್ತ ವಾದ ಮಂಡಿಸಿಲ್ಲ.
ಕಾವೇರಿ ಪ್ರಾಧಿಕಾರದ ಸಭೆಗೆ ನಮ್ಮವರು ವರ್ಚುವಲ್ ಮೂಲಕ ಹಾಜರಾಗಿದ್ದರು. ಕಾವೇರಿ ನದಿ ವಿಚಾರದಲ್ಲಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಮುಂದೆಯೂ ಸಹಕಾರ ನೀಡುತ್ತೇವೆ ಎಂದು ಹೇಳಿದರು.
Key words: Center – provided – cooperation – Cauvery issue-Union Minister -Prahlad Joshi