ನವದೆಹಲಿ,ಜುಲೈ,23,2024 (www.justkannada.in): ಉದ್ಯೋಗಿಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದುಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50 ಸಾವಿರದಿಂದ 75 ಸಾವಿರಕ್ಕೆ ಸರ್ಕಾರ ಹೆಚ್ಚಿಸಿಸಲಾಗಿದೆ.
ಕುಟುಂಬ ಪಿಂಚಣಿ ಮೇಲಿನ ವಿನಾಯಿತಿ ಮಿತಿಯನ್ನು 15 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಲಾಗುತ್ತಿದೆ. ಈ ಎರಡು ಬದಲಾವಣೆಗಳಿಂದ ನಾಲ್ಕು ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಹೇಳಿದರು.
ಈ ಸ್ಟಾಂಡರ್ಡ್ ಡಿಡಕ್ಷನ್ ಏರಿಕೆಯಿಂದ ಆದಾಯ ತೆರಿಗೆ ಪಾವತಿಯಲ್ಲಿ ಒಟ್ಟು 17,500 ರೂ.ಗಳನ್ನು ತೆರಿಗೆದಾರರು ಉಳಿತಾಯ ಮಾಡಬಹುದಾಗಿದೆ.
Key words: central Budget, standard deduction, amount, Increase