CENTRAL BUDGET: ಕೃಷಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ. ಘೋಷಣೆ

ನವದೆಹಲಿ,ಜುಲೈ,22,2024 (www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು ರೈತರು ಮತ್ತು ಕೃಷಿ ಕ್ಷೇತ್ರಕ್ಕೆ  ಬಜೆಟ್ ನಲ್ಲಿ 1.5 ಲಕ್ಷ ಕೋಟಿ ರೂ. ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್,  ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿರುವಂತೆ ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದೇವೆ, ಭರವಸೆಯನ್ನು ಈಡೇರಿಸಿದ್ದೇವೆ ಎಂದರು.

ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು. ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Key words: Central Budget, Rs 1.5 lakh crore, griculture sector