ಬೆಂಗಳೂರು, ಅಕ್ಟೋಬರ್ 01, 2023 (www.justkannada.in): ಅಕ್ಟೋಬರ್ 10 ರೊಳಗೆ ಕೇಂದ್ರದ ನಿಯೋಗ ರಾಜ್ಯಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕನ ನಡೆಸಲಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.
ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದೇವೆ ಎಂದು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಕೊರತೆಯಿಂದ ರಾಜ್ಯದಲ್ಲಿ 40 ಲಕ್ಷ ಹೆಕ್ಟೇರ್ ಪ್ರದೇಶದ 28,000 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ ಎಂದು ತಿಳಿಸಿದ್ದಾರೆ.
ಬೆಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಕೆಗೆ ಸೆಪ್ಟೆಂಬರ್ 30ರ ಗಡುವು ನೀಡಿದ್ದು, ಇನ್ನೂ 10 ದಿನಗಳಲ್ಲಿ ಬೆಳೆಹಾನಿಯ ಸಮಗ್ರ ಮಾಹಿತಿ ತಿಳಿಯಲಿದೆ ಎಂದು ಹೇಳಿದ್ದಾರೆ.