ಬೆಂಗಳೂರು,ಸೆಪ್ಟಂಬರ್,11,2024 (www.justkannada.in): ಮಹತ್ವಾಕಾಂಕ್ಷೆಯ ಸ್ಯಾಟಲೈಟ್ ರಿಂಗ್ ರಸ್ತೆ(STRR) ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ ನೀಡಲಾಗಿದ್ದು ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಿಗೆ ಪ್ರಯೋಜನವಾಗಲಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ತಿಳಿಸಿದರು.
4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದ ಡಾ. ಸಿ ಎನ್ ಮಂಜುನಾಥ್ ಅವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕಾಮಗಾರಿಗೆ ಅನುಮೋದನೆ ನೀಡಲು ಮನವಿ ಸಲ್ಲಿಸಿದ್ದರು, ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು 45 ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದ್ದರು,ಆಶ್ಚರ್ಯ ಎಂದರೆ 30 ದಿನಗಳಲ್ಲೇ ಅನುಮೋದನೆ ನೀಡಿದ್ದಾರೆ.
₹4,750 ಕೋಟಿಗಳ ಅಂದಾಜಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಗೆ ಟೆಂಡರ್ ಪ್ರಕ್ರಿಯೆಗೆ ಅನುಮೋದನೆ ನೀಡಲಾಗಿದೆ. ಈ ಪ್ರಮುಖ ಮೂಲಸೌಕರ್ಯ ಯೋಜನೆಯು ಈಡಿ ಬೆಂಗಳೂರು ನಗರ ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಾದ ಡಾಬಸ್ ಪೇಟೆ ದೇವನಹಳ್ಳಿ ದೊಡ್ಡಬಳ್ಳಾಪುರ ಸರ್ಜಾಪುರ ಹೊಸಕೋಟೆ ಕನಕಪುರ ಅತ್ತಿಬೆಲೆ ಸೂಲಿಬೆಲೆ ತಟ್ಟೆಕೆರೆ ರಾಮನಗರ ಮಾಗಡಿ ಮತ್ತು ಆನೇಕಲ್‌ಗೆ ಗಣನೀಯ ಪ್ರಯೋಜನವನ್ನು ನೀಡುತ್ತದೆ. ಇದು ವಾಹನ ಸಂಚಾರ ದಟ್ಟಣೆಯನ್ನು ನಿವಾರಿಸುವುದು ಮತ್ತು ಪ್ರಯಾಣದ ದಕ್ಷತೆ, ಸುರಕ್ಷತೆಯನ್ನು ಹೆಚ್ಚಿಸುವುದರ ಜೊತೆಗೆ ಪ್ರಯಾಣದ ಸಮಯ ಉಳಿಯುತ್ತದೆ.
ಈ ಯೋಜನೆಯನ್ನು ಭಾರತಮಾಲಾ ಪರಿಯೋಜನಾ ಯೋಜನೆಯಡಿಯಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗುತ್ತಿದೆ ಹಾಗೂ ಈ ಪ್ರದೇಶದ ಅಭಿವೃದ್ಧಿಗೆ ಪ್ರಮುಖ ಮೈಲಿಗಲ್ಲಾಗಿದೆ, ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ದೀರ್ಘಕಾಲಿಕ ಪರಿಹಾರವನ್ನು ನೀಡುತ್ತದೆ ಮತ್ತು ಸಾವಿರಾರು ದೈನಂದಿನ ಪ್ರಯಾಣಿಕರಿಗೆ ಸಂಪರ್ಕವನ್ನು ಸುಧಾರಿಸಲು ನೆರವಾಗಲಿದೆ.
ಸಮಸ್ತ ರಾಜ್ಯದ ಜನತೆಯ ಪರವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಗೆ ಟೆಂಡರ್ ಪ್ರಕ್ರಿಯೆಯನ್ನು ಅನುಮೋದಿಸಿದ್ದಕ್ಕಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದ ಡಾ.ಸಿಎನ್ ಮಂಜುನಾಥ್ ತಿಳಿಸಿದ್ದಾರೆ.
ಈ ದೂರದೃಷ್ಟಿ ಯೋಜನೆಯು ಬೆಂಗಳೂರು ನಗರ,ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳಾದ ಕನಕಪುರ, ಮಾಗಡಿ, ರಾಮನಗರ, ದಾಬಸ್ ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸುಲಿಬೆಲೆ ಮತ್ತು ಅನೇಕಲ್‌ಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ, ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ ಮತ್ತು ಪ್ರಯಾಣದ ಸಮಯವನ್ನು ಕಡಿಮೆಗೊಳಿಸುತ್ತದೆ. ಅನೇಕ ವರ್ಷಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಈ ಯೋಜನೆಯು ಮುಂದುವರೆಯುತ್ತಿರುವುದರಿಂದ ಸಂಸದರಾದ ಸನ್ಮಾನ್ಯ ಡಾ. ಸಿ ಎನ್ ಮಂಜುನಾಥ್ ಅವರು ಸಂತಸ ವ್ಯಕ್ತಪಡಿಸಿದರು.
Key words: Central Government, Approval, Satellite Ring Road (STRR) Project , Dr. C N Manjunath