ನವದೆಹಲಿ,ಮೇ,18,2021(www.justkannada.in): ಕೊರೋನಾ ಸೋಂಕಿನ 2ನೇ ಅಲೆ ಬಳಿಕ, 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮುಂದಿನ 10ರಿಂದ 12 ದಿನಗಳಲ್ಲಿ ಕೇಂದ್ರ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ.
ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವಕೇಂದ್ರ ಸರ್ಕಾರ, 2 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಚಿಂತನೆ ನಡೆಸಿದೆ.
ಆರಂಭದಲ್ಲಿ ಮಕ್ಕಳಿಗೆ ಪ್ರಾಯೋಗಿಕವಾಗಿ ಲಸಿಕೆ ನೀಡಲಾಗುತ್ತದೆ. ಈಗಾಗಲೇ 18 ರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಅಭಿಯಾನ ನಡೆಸಲಾಗುತ್ತಿದೆ. ಇದೀಗ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಮುಂದಾಗಿದೆ.
Key words: Central government- decision – vaccinate- children -next -10 to 12 days