ಕೇಂದ್ರ ಸರ್ಕಾರ ಕೃಷಿ ಮಸೂದೆ ಜಾರಿ ಕ್ರಮದಿಂದ ಹಿಂದೆ ಸರಿಯಬೇಕು : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್

ಬೆಂಗಳೂರು,ಡಿಸೆಂಬರ್,27, 2020(www.justkannada.in) : ಕೇಂದ್ರ ಸರ್ಕಾರ ಕೂಡಲೇ ಕೃಷಿ ಮಸೂದೆ ಜಾರಿ ಮಾಡುವ ಕ್ರಮದಿಂದ ಹಿಂದೆ ಸರಿಯಬೇಕು ಎಂದು ಕರ್ನಾಟಕ ಹೈ ಕೂರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Teachers,solve,problems,Government,bound,Minister,R.Ashok

ಸಮೃದ್ಧಿಯ ಭಾಗವಾಗಿದ್ದ ರೈತರಿಗೆ ರಾಸಾಯನಿಕ ಬಳಸುವುದನ್ನು ಕಲಿಸಿದ, ಕಳಪೆ ಬೀಜಗಳನ್ನು ವಿತರಿಸಿದ ನಾವೇ ಅವರು ಆತ್ಮಹತ್ಯೆಗೆ ಇಳಿಯುವಂತೆ ಮಾಡಿದ್ದೇವೆ ಪರಿಸ್ಥಿತಿಯನ್ನು ಅರಿತು ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು ತಾನು ತರಲು ಉದ್ಧೇಶಿಸಿರುವ ಕೃಷಿ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು ಎಂದಿದ್ದಾರೆ.

ಹಿಂದಿನ ಎಷ್ಟೋ ಸರ್ಕಾರಗಳು ಜನಾಭಿಪ್ರಾಯಕ್ಕೆ ಮಣಿದು ತಾವು ತರಲು ಮುಂದಾದ ಮಸೂದೆಗಳನ್ನು, ಯೋಜನೆಗಳನ್ನು ಕೈಬಿಟ್ಟಿವೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಹಿಂದೆ ಇಡೀ ಭಾರತದ ನೊಂದ ರೈತರಿದ್ದಾರೆ, ಇದನ್ನು ಸರ್ಕಾರ ಅರಿಯಬೇಕುಎಂದು ಹೇಳಿದರು.

central,government,should,back,off,farm,bill,Retired,Justice,HN Nagamohana Das

ಇಂದು ಭೂಸುಧಾರಣೆ, ಅದಕ್ಕೆ ತರುತ್ತಿರುವ ತಿದ್ದುಪಡಿ, ಎಪಿಎಂಸಿ ಕಾಯಿದೆ ತಿದ್ದುಪಡಿ, ಬೀಜ ಕಾಯಿದೆ ತಿದ್ದುಪಡಿ, ಎಲ್ಲವೂ ರೈತರನ್ನು ಗುಲಾಮಗಿರಿಯತ್ತ ತಳ್ಳುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

 key words : central-government-should-back-off-farm-bill-Retired-Justice-HN Nagamohana Das