ಬೆಂಗಳೂರು, ಆಗಸ್ಟ್, 23, 2020(www.justkannada.in) : ನಿಷ್ಪಕ್ಷಪಾತ ತನಿಖೆ ಬಳಿಕ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.
ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆ ಸಂಬಂಧಿಸಿದಂತೆ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ದೇವಿ ಆನಂದ್ ಮಾತನಾಡಿ, ಮುಖ್ಯಮಂತ್ರಿಗಳು ನೀಡಿರುವ ಭರವಸೆ ಹಾಗೂ ಮಾನವೀಯತೆಯ ದೃಷ್ಟಿಯಿಂದ ಪ್ರತಿಭಟನೆಯನ್ನು ಕೈಬಿಡುತ್ತಿದ್ದೇವೆ. ಆದರೆ, ತಪ್ಪು ಮಾಡಿರುವ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವವರೆಗೆ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಸಚಿವ ಸುಧಾಕರ್ ಅವರದ್ದು ಕೆಟ್ಟ ಹೇಳಿಕೆ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವೈದ್ಯರ ಕುರಿತು ನೀಡಿರುವ ಹೇಳಿಕೆ ಸರಿಯಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ವೈದ್ಯಾಕೀಯ ವಿಚಾರಗಳ ಅರಿವಿರುವವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿ, ನೋಡೆಲ್ ಅಧಿಕಾರಿಗಳು ವೈದ್ಯಕೀಯ ವಿಷಯಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶ ಮಾಡದಂತೆ ಎಚ್ಚರಿಕೆವಹಿಸುವಂತೆ ಮನವಿ ಮಾಡಿದ್ದಾರೆ.
ಕೊರೊನಾ ವಿರುದ್ಧ ಹೋರಾಟ ವ್ಯರ್ಥವಾಗಬಾರದು
ರೋಗಿಗಳ ಹಿತದೃಷ್ಟಿಯಿಂದ ಕೆಲಸಕ್ಕೆ ಹಾಜರಾಗುತ್ತಿದ್ದು, ಕೊರೊನಾ ವಿರುದ್ಧ ಕಳೆದ 6 ತಿಂಗಳಿನಿದ ನಡೆಸಿರುವ ನಿರಂತರ ಹೋರಾಟವು ವ್ಯರ್ಥವಾಗಬಾರದು. ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುತ್ತೇವೆ. , ಬಿಬಿಎಂಪಿ ಮಾದರಿಯಲ್ಲಿ ಇಲ್ಲಿಯೂ ವೈದ್ಯರನ್ನು ನೇಮಿಸುವುದರ ಜೊತೆಗೆ ಶೀಘ್ರವೇ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಿಇಒ ವರ್ಗಾವಣೆಗೆ ಸ್ವಾಗತ
ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವರ್ಗಾವಣೆಗೆ ಸ್ವಾಗತ ಕೋರಿದ್ದು, ತನಿಖೆಯ ಬಳಿಕ ಪ್ರಶಾಂತ್ ಕುಮಾರ್ ಅವರನ್ನು ಸಸ್ಪೆಂಡ್ ಮಾಡಬೇಕು. ಕೆಎಎಸ್, ಐಎಎಸ್ ಅಧಿಕಾರಿಗಳಿಗೆ ವೈದ್ಯಕೀಯದ ಬಗ್ಗೆ ಗೊತ್ತಿರುವುದಿಲ್ಲ. ಹೀಗಾಗಿ, ಕೊರೊನಾ ನೊಡೆಲ್ ಅಧಿಕಾರಿಗಳಾಗುವುದು ಬೇಡ .ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನ ನೇಮಕ ಮಾಡಿಕೊಳ್ಳಬೇಕು ಎಂದು ಮೈಸೂರು ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ್ ಆಗ್ರಹಿಸಿದ್ದಾರೆ.
Key words : CEO-after-impartial- investigation-Action-BSY-Doctors-strike-end