ಬೆಂಗಳೂರು,ಜೂನ್,15,2023(www.justkannada.in): 2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು ಬೆಳಗ್ಗೆ 9.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ, ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಈ ಬಾರಿ ಸಿಇಟಿಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಶ್ರೀಕುಮಾರನ್ ಕಾಲೇಜು ವಿದ್ಯಾರ್ಥಿ ವಿಘ್ನೇಶ್ ಪ್ರಥಮ ಸ್ಥಾನ ಗಳಿಸಿದರೇ ಬೆಂಗಳೂರಿನ ಆರ್ ವಿ ಕಾಲೇಜು ವಿದ್ಯಾರ್ಥಿ ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಮೃದ್ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 20 ಹಾಗೂ 21ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಿತ್ತು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ & ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್, ಬಿಎಸ್ಸಿ ನರ್ಸಿಂಗ್ಗೆ ಪ್ರವೇಶ ಪರೀಕ್ಷೆ ನಡೆದಿತ್ತು. ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂದು ಅದರ ಫಲಿತಾಂಶ karresults.nic.in ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ .
Key words: CET –result- announced- Vignesh -topper – engineering department.