ಬೆಂಗಳೂರು,ಸೆಪ್ಟಂಬರ್,14,2023(www.justkannada.in): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ ಹಣ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮವಾಗಲಿದೆ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಗೂ ಸಂಬಂಧವಿಲ್ಲ. ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಕೇಸ್ ನಲ್ಲಿ ಸ್ವಾಮೀಜಿ ಬಗ್ಗೆ ತನಿಖೆಯಾಗಲಿದೆ. ಸ್ವಾಮೀಜಿ ತಪ್ಪಿದ್ದರೇ ಅವರ ಬಂಧನವೂ ಆಗುತ್ತದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ ಎಂದು ತಿಳಿಸಿದರು.
ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದು ತಿಳಿಸಿದರು.
ಸಿಸಿಬಿ ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮ ಮುಂದೆ ಮಾತನಾಡಿದ್ದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದರು.
Key words: Chaitra Kundapur -arrest – fraud –case-Home Minister -Dr. G. Parameshwar.