ಬೆಂಗಳೂರು,ಸೆಪ್ಟೆಂಬರ್ 21,2023(www.justkannada.in): ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ಪಡೆದು ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಆರೋಪಿಗಳನ್ನ ಬಂಧಿಸಿ 2 ಕೋಟಿ ರೂ. ಹಣ ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ವಂಚನೆ ಪ್ರಕರಣದಲ್ಲಿ ಇದುವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳಿಂದ ಚಿನ್ನ, ನಗದು, ಠೇವಣಿ ಹಣ ಸೇರಿದಂತೆ ಒಟ್ಟು 2 ಕೋಟಿಗೂ ಹೆಚ್ಚು ಜಪ್ತಿ ಮಾಡಲಾಗಿದೆ. ಇನ್ನು ಈ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನು ಈ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಸಿಬಿ ಪೊಲೀಸರು, ಚೈತ್ರಾ ಕುಂದಾಪುರ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ 1 ಕೋಟಿ 8 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಚೈತ್ರಾಳ ಮನೆಯಲ್ಲಿದ್ದ ಸುಮಾರು 65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.
Key words: Chaitra Kundapur –gang- fraud- case – businessman-8 accused- arrested