ಬೆಂಗಳೂರು,ಅ,2,2019(www.justkannada.in): ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವವರ ಬಗ್ಗೆ ಕನಿಕರವಿದೆ ಎಂದು ಟ್ವಿಟ್ ಮಾಡಿದ್ದ ಕೇಂದ್ರ ಸಚಿವ ಸದಾನಂದಗೌಡರಿಗೆ ಟ್ವಿಟ್ಟರ್ ನಲ್ಲೇ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ ಎಂದು ಕಿಡಿಕಾರಿದ್ದಾರೆ.
ಡಿವಿ ಸದಾನಂದಗೌಡರೇ ನೊಂದಿರುವ ಉತ್ತರ ಕರ್ನಾಟಕದ ಜನರನ್ನ ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೆ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ ಎಂದು ಡಿ.ವಿ ಸದಾನಂದಗೌಡರನ್ನ ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿದ್ದ ಕೇಂದ್ರ ಸಚಿವ ಸದಾನಂದಗೌಡರು, ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ,ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಲಾಗಿದೆ ಎಂದು ಹೇಳಿದ್ದರು.
Key words: chakravarthi Sulibele -Tong –central minister- DV Sadananda Gowda-twitter