ನ್ಯಾಯ ಕೇಳಲು ಪ್ರತಿಭಟನೆ: ಪ್ರಿಯಾಂಕ್ ಖರ್ಗೆ ಬೇಷರತ್ತಾಗಿ ರಾಜೀನಾಮೆ ನೀಡಲಿ- ಛಲವಾದಿ ನಾರಾಯಣಸ್ವಾಮಿ

ಕಲ್ಬುರ್ಗಿ,ಜನವರಿ,4,2025 (www.justkannada.in):  ನ್ಯಾಯ ಕೇಳುವುದಕ್ಕಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಸಚಿವ ಪ್ರಿಯಾಂಕ್ ಖರ್ಗೆ ಬೇಸರತ್ತಾಗಿ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಇಂದು ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ ಬೇಸರತ್ತಾಗಿ ರಾಜೀನಾಮೆ ನೀಡಬೇಕು.  ಪ್ರಿಯಾಂಕ್ ಖರ್ಗೆ ಕೊಲೆ ಮಾಡಿದ್ದಾರೆ ಎಂದು ಹೇಳುತ್ತಿಲ್ಲ. ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಆಪ್ತರ ಹೆಸರಿದೆ. ದೂರು ದಾಖಲಾದರೂ ಯಾರನ್ನು ಬಂಧಿಸಿಲ್ಲ ಎಂದು ಕಿಡಿಕಾರಿದರು.

ಧೈರ್ಯವಿದ್ದರೇ ಪ್ರಿಯಾಂಕ್ ಖರ್ಗೆ ರಾಜೀನಾಮೆ  ಪಡೆಯಲಿ ಎಂದು ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

Key words: Protest, Priyank Kharge, resign, Chalavadi Narayanaswamy