ಸಿಎಂ ತಮ್ಮ ಹೇಳಿಕೆ ಸಾಕ್ಷಿ ಸಮೇತ ಸಾಬೀತುಪಡಿಸದಿದ್ದರೇ ರಾಜೀನಾಮೆ ನೀಡಲಿ- ಛಲವಾದಿ ನಾರಾಯಣಸ್ವಾಮಿ ಸವಾಲು

ಹುಬ್ಬಳ್ಳಿ,ಏಪ್ರಿಲ್,15,2025 (www.justkannada.in):  ಸಾವರ್ಕರ್‌  ನನ್ನನ್ನು ಸೋಲಿಸಿದರೆಂದು ಡಾ.ಬಿ.ಆರ್‌. ಅಂಬೇಡ್ಕರ್‌ ಪತ್ರ ಬರೆದಿದ್ದಾರೆ  ಎಂದು ನಿನ್ನೆ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ.

ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ , ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ನೀಡಿರುವ ಹೇಳಿಕೆಯನ್ನ ಸಾಕ್ಷಿ ಸಮೇತ ಸಾಬೀತುಪಡಿಸಬೇಕು. ಇದಲ್ಲದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ರಾಜಕೀಯದಿಂದ ಸನ್ಯಾಸ ಪಡೆಯಬೇಕು. ಒಂದು ವೇಳೆ ಸಿಎಂ ಸಿದ್ದರಾಮಯ್ಯ ಅವರು  ತಮ್ಮ ಹೇಳಿಕೆಯನ್ನ ಸಾಕ್ಷಿ ಸಮೇತ ಸಾಬೀತುಪಡಿಸಿದರೆ ನಾನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಸವಾಲು ಹಾಕಿದರು.

‘ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. 5 ಗ್ಯಾರಂಟಿಗಳ ಮೇಲೆ 5 ವರ್ಷ ತನ್ನ ಆಡಳಿತ ಪೂರ್ಣಗೊಳಿಸಿದರೆ ಸಾಕು ಎನ್ನುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ ಎಂದು ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

Key words: CM Siddaramaiah, statement, resign, Chalavadi Narayanaswamy