ದುಬೈ, ಮಾರ್ಚ್, 4,2025 (www.justkannada.in) ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 264 ರನ್ ಗಳಿಗೆ ಆಲ್ ಔಟ್ ಆಗಿದೆ.
ಈಗ ಭಾರತದ ಗೆಲುವಿಗೆ 265 ರನ್‌ಗಳ ಅಗತ್ಯವಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ನಾಯಕ ಸ್ಟೀವ್ ಸ್ಮಿತ್ 73, ಅಲೆಕ್ಸ್ ಕ್ಯಾರಿ 61 ರನ್ ಗಳಿಸಿ ಅರ್ಧಶತಕ ಬಾರಿಸಿದರು. ಮಾರ್ನಸ್ ಲಾಬುಷೇನ್ 29 ಹಾಗೂ ಜೋಶ್ ಇಂಗ್ಲಿಸ್ 11, ಗ್ಲೆನ್ ಮ್ಯಾಕ್ಸ್‌ವೆಲ್ 7 ರನ್ ಗಳಿಗೆ ಔಟ್ ಆದರು.
ಭಾರತದ ಪರ ವೇಗದ ಬೌಲರ್ ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿದರೇ , ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜ ತಲಾ ಎರಡು ಮತ್ತು ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಗಳಿಸಿದರು.
Key words: Champion Trophy, First semi-final, Aussies, India