ಮೈಸೂರು,ಅಕ್ಟೋಬರ್,29,2020(www.justkannada.in) : ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಥ ಎಳೆದು ಚಾಮುಂಡೇಶ್ವರಿ ರಥೋತ್ಸವಕ್ಕೆ ಚಾಲನೆ ನೀಡಿದರು.
ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ ನಡೆಸಲಾಯಿತು. ಚಾಮುಂಡೇಶ್ವರಿಗೆ ಯದುವೀರ್ ಪುಷ್ಪಾರ್ಚನೆ ಮಾಡಿ ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ರಥೋತ್ಸವದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್,ಎಲ್.ನಾಗೇಂದ್ರ ಭಾಗಿಯಾಗಿದ್ದರು.
ಅತ್ಯಂತ ಸರಳವಾಗಿ ಜಾತ್ರೆ ಆಚರಣೆ
ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದಿಕ್ಷೀತ್ ಮಾತನಾಡಿ, ಸಾಂಪ್ರದಾಯಿಕವಾಗಿ ಚಾಮುಂಡೇಶ್ವರಿ ರಥೋತ್ಸವ ನೆರವೇರಿದೆ. ಸಾಂಪ್ರದಾಯಕ್ಕೆ ಧಕ್ಕೆ ಬಾರದಂತೆ ರಥೋತ್ಸವ ನಡೆಸಿದ್ದೇವೆ. ಈ ಬಾರಿ ತೆಪ್ಪೋತ್ಸವ ಇರುವುದಿಲ್ಲ ಎಂದರು.
ಈ ಬಾರಿ ತೆಪ್ಪೋತ್ಸವ ಇರೋದಿಲ್ಲ
ರಾಜ್ಯದ ಎಲ್ಲಿಯೂ ರಥೋತ್ಸವ ನಡೆದಿಲ್ಲ. ನಮ್ಮಲ್ಲಿ ಸರಳವಾಗಿ ರಥೋತ್ಸವ ನಡೆಯಲು ಅವಕಾಶ ನೀಡಲಾಗಿದೆ. ಜಿಲ್ಲಾಡಳಿತ ಸಹಕಾರಕ್ಕೆ ನಾವು ಧನ್ಯವಾದ ಹೇಳುತ್ತೇವೆ. ಈ ಬಾರಿ ತೆಪ್ಪೋತ್ಸವ ಇರೋದಿಲ್ಲ. ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
key words : Chamundeshwari-Rath Yatra-Dynasty-Yadavir-driving