ಆಷಾಢಕ್ಕೆ ಬರಲು ಸಾಧ್ಯವಾಗಿರಲಿಲ್ಲ: ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಮೈಸೂರು,ಆಗಸ್ಟ್,17,2021(www.justkannada.in):  ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢ ಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾತನಾಡಿದ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ತಾಯಿ ಚಾಮುಂಡೇಶ್ವರಿ ನನಗೆ ಎಲ್ಲಾ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ಎಲ್ಲರೂ ಗೇಲಿ ಮಾಡಿದ್ದರು. ದಸರಾ ಆಚರಣೆ ಮಾಡೋದು ಗೊತ್ತಿಲ್ಲ ಅಂತ ಗೇಲಿ ಮಾಡ್ತಿದ್ರು. ಆದರೆ ತಾಯಿ ಕೃಪೆಯಿಂದ ಅದನ್ನ ಮಾಡಿ ತೋರಿಸಿದ್ದೇನೆ ಎಂದರು.

ದೇಶದ ಶೇಕಡಾ 80ರಷ್ಟು ರೈತರ ಹಿತ ಕಾಯಬೇಕಿದೆ.

ಪ್ರಧಾನಿ ಮೋದಿ ದೇಶದ ರೈತನ ಮಗಳೊಬ್ಬಳಿಗೆ ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ. ಹಳ್ಳಿಯಲ್ಲಿ ನಾನು ಓದುವಾಗ ಕರೆಂಟ್, ರಸ್ತೆ ಕೂಡ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಇಂತಹ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ದೇಶದ ಶೇಕಡಾ 80ರಷ್ಟು ರೈತರ ಹಿತ ಕಾಯಬೇಕಿದೆ. ಅವರು ಬೇರೆ ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಿದ್ರೆ ಮಾಡುವವರನ್ನು ಎಚ್ಚರಿಸಬಹುದು:ಆದರೆ ನಿದ್ರೆ ಮಾಡುವಂತೆ ನಟಿಸುವವರನ್ನು ಅಲ್ಲ.

ಕೇಂದ್ರ ಕೃಷಿ ಕಾಯ್ದೆಗೆ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿದ್ರೆ ಮಾಡುವವರನ್ನು ಎಚ್ಚರಿಸಬಹುದು. ಆದರೆ ನಿದ್ರೆ ಮಾಡುವಂತೆ ನಟಿಸುವವರನ್ನು ಅಲ್ಲ. ದೆಹಲಿಯ ರೈತರ ಹೋರಾಟ ಈಗ ಕೇವಲ ದಲ್ಲಾಳಿಗಳ ಹೋರಾಟವಾಗಿ ಉಳಿದಿದೆ. ರೈತರ ಮನವೊಲಿಸಬಹುದು. ಆದರೆ ರೈತರಂತೆ ನಟಿಸುವವರ ಮನವೊಲಿಸಲು ಸಾಧ್ಯವಿಲ್ಲ. ನೂತನ ಕಾಯ್ದೆಯಿಂದ ರೈತರು ಎಪಿಎಂಸಿ ಹೊರತಾಗಿ ಹೊರಗೆ ವ್ಯಾಪಾರ ಮಾಡಬಹುದು. ಇದರಿಂದ ಮಂಡ್ಯದ ರೈತನ ಹೊಲಕ್ಕೆ ಮುಂಬೈನಿಂದ ಟ್ರಕ್ ಬಂದು ನಿಲ್ಲುವಂತೆ ಆಗುತ್ತೆ. ರೈತ ಹೆಚ್ಚಿನ ಬೆಲೆಗೆ ತನ್ನ ಬೆಳೆ ಮಾರಾಟ ಮಾಡಲು ಅನುಕೂಲ ಆಗಿದೆ ಎಂದರು.

ಕೊರೊನಾದಿಂದ ಕೃಷಿಗೆ ತೊಡಕಾಗಿದೆ ಅಂತ ಇಲ್ಲ.

ಕೇಂದ್ರ ಕೃಷಿ ಸಚಿವೆಯಾದ ನಂತರ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುವೆ. ಒಂದೊಂದು ಜಿಲ್ಲೆಯ ರೈತರ ಸಮಸ್ಯೆ ಬೇರೆಯದಾಗಿದೆ. ಅಯಾ ಜಿಲ್ಲೆಗಳಿಗೆ ತೆರಳಿ ಅಲ್ಲಿನ ಬೆಳೆ, ಅಮಸ್ಯೆಗಳನ್ನು ಪರಿಹಾರ ಮಾಡುವ ಕೆಲಸ ಮಾಡುತ್ತೇನೆ. ಕೊರೊನಾದಿಂದ ಕೃಷಿಗೆ ತೊಡಕಾಗಿದೆ ಅಂತ ಇಲ್ಲ. ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆಹಾರ ಪದಾರ್ಥಗಳ ಶೇಖರಣೆ ಆಗಿರೋದನ್ನು ವರದಿಗಳು ಹೇಳುತ್ತಿವೆ. ಕೊರೊನಾ ಸಂದರ್ಭದಲ್ಲೂ ದೇಶದಲ್ಲಿ ದಾಖಲೆ ಪ್ರಮಾಣದ ಕೃಷಿ ಉತ್ಪನ್ನ ಶೇಖರಣೆಯಾಗಿದೆ. ಅದೇ ರೀತಿ ದಾಖಲೆ ಪ್ರಮಾಣದಲ್ಲಿ ಹಣ್ಣು ತರಕಾರಿ ಬೆಳೆಯಲಾಗಿದೆ. ನಗರಗಳಲ್ಲಿ ಇದ್ದ ನಮ್ಮ ಯುವಕರು ಹಳ್ಳಿಗೆ ಹೋಗಿ ಕೃಷಿ ಮಾಡಿದರ ಪರಿಣಾಮ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಖಂಡನೀಯ.

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಇದೊಂದು ತೀವ್ರ ಖಂಡನೀಯ ವಿಚಾರ. ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಆತಂಕ ತಂದಿದೆ. ಆಫ್ಘಾನಿಸ್ತಾನದ ಪಕ್ಕದಲ್ಲೇ ಪಾಕಿಸ್ತಾನ ಇದೆ. ಈ ವಿಚಾರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ದನಿ ಎತ್ತಬೇಕು. ವಿಶ್ವಸಂಸ್ಥೆ ಮೇಲೆ ಒತ್ತಡ ಏರಿ ಸಮಸ್ಯೆ ಬಗೆ ಹರಿಸಬೇಕು ಎಂದರು.

ENGLISH SUMMARY….

“I couldn’t come in the month of Ashada: I will climb the steps of Chamundi hill during Navarathri: Union Minister Shobha Karandlaje
Mysuru, August 17,2021 (www.justkannada.in): “Every year, I used to climb the steps of Chamundi hills and have the darshan of Goddess Chamundeshwari during ‘Ashaada’ month. But this time, there were instructions for all the Union Ministers not to leave the headquarters. Hence, I couldn’t visit this year. But I will visit during Navarathri,” opined Union Minister Shobha Karandlaje.
She visited the Chamundi hills today. Speaking to the press persons after her visit she said, “everyone used to tease me saying I cannot conduct Mysuru Dasara in an organized manner. But with the blessings of Goddess Chamundeshwari, I handled it successfully.”
“Prime Minister Narendra Modi has recognized me, a farmer’s daughter, and has given the responsibility of agriculture portfolio. When I was in school there was no power or proper roads in my village. I come from such a village. But the Hon’ble Prime Minister has given me this responsibility with all faith. I have to protect the interest of 80% of farmers of this country. I have to ensure to prevent them from migrating to other professions quitting agriculture. I am in the process of preparing suitable plans in this regard,” she added.
Keywords: Union Agriculture Minister/ Shobha Karandlaje/ Mysuru/ Chamundi hills

Key words: chamundi hills- central minister- Shobha Karandlaje-Navratri.