ಬೆಂಗಳೂರು, ಜುಲೈ 23, 2021 (www.justkannada.in): ಶ್ರೀಲಂಕಾ ವಿರುದ್ಧ 3ನೇ ಏಕದಿನ ಪಂದ್ಯಕ್ಕಾಗಿ ಶಿಖರ್ ಧವನ್ ಪಡೆ ಸಜ್ಜಾಗಿದೆ.
ಮೊದಲ ಏಕದಿನ ಪಂದ್ಯವನ್ನು 7 ವಿಕೆಟ್ಗಳಿಂದ ಗೆದ್ದುಕೊಂಡಿದ್ದ ಭಾರತ, 2ನೇ ಪಂದ್ಯದಲ್ಲಿ 3 ವಿಕೆಟ್ಗಳ ರೋಚಕ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲೂ ಗೆದ್ದು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.
ಮೊದಲೆರಡು ಪಂದ್ಯಗಳಲ್ಲಿ ಅವಕಾಶ ವಂಚಿತರಾಗಿದ್ದ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಮೊದಲೆರಡು ಪಂದ್ಯಗಳಲ್ಲಿ ಫಾರ್ಮ್ ಪ್ರದರ್ಶಿಸಿದ್ದ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಕಾದಿದ್ದ ಆಟಗಾರರನ್ನು ಕಣಕ್ಕಿಳಿಸುವ ಪ್ಲ್ಯಾನಿಂಗ್ನಲ್ಲಿದ್ದಾರೆ ಕೋಚ್ ರಾಹುಲ್ ದ್ರಾವಿಡ್.
ಅಂತಿಮ ಏಕದಿನ ಪಂದ್ಯ ನಡೆಯುತ್ತಿರುವುದರಿಂದ ದೇವದತ್ ಪಡಿಕ್ಕಲ್ಗೆ ಅಥವಾ ರುತುರಾಜ್ಗೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ನೀಡುವ ಸಾಧ್ಯತೆಯಿದೆ.