ಬೆಂಗಳೂರು,ಆಗಸ್ಟ್,24,2023(www.justkannada.in): ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಸನ್ಮಾನಿಸಿ ಅಭಿನಂದಿಸಿದರು.
ಇಸ್ರೋಗೆ ಭೇಟಿ ನೀಡಿದ ಸಿಎಂ ಸಿದ್ಧರಾಮಯ್ಯ, ಇಸ್ರೋ ಅಧ್ಯಕ್ಷ ಸೋಮನಾಥ ಅವರಿಗೆ ಮೈಸೂರು ಪೇಟಾ ತೊಡಿಸಿ ಸನ್ಮಾನಿಸಿದರು. ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದರು. ಈ ಸಮಯದಲ್ಲಿ ಇಸ್ರೋ ವಿಜ್ಞಾನಿಗಳು ಚಂದ್ರಯಾನ-3 ಯಶಸ್ವಿ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ವಿವರಿಸಿದರು. ಈ ವೇಳೆ ಸಚಿವ ಬೋಸರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಸರ್ಕಾರದಿಂಧ ಇಸ್ರೋ ವಿಜ್ಞಾನಿಗಳಿಗೆ ಗೌರವ ನೀಡುತ್ತೇವೆ. ಇಡೀ ಜಗತ್ತು ಭಾರತ ಕಡೆ ನೋಡುವಂತಹ ಸಾಧನೆ ಮಾಡಿದ್ದಾರೆ. ನಾವೆಲ್ಲರೂ ಇಸ್ರೋ ಸಾಧನೆಯನ್ನ ಮೆಚ್ಚಲೇಬೇಕು ಎಂದು ಶ್ಲಾಘಿಸಿದರು.
Key words: Chandrayaan-3- success –CM Siddaramaiah- visits -ISRO office – congratulates