ಬೆಂಗಳೂರು,ಡಿಸೆಂಬರ್,7,2020(www.justkannada.in): ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಾಳೆ (ಡಿ.8) ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಗೆ ಅನೇಕ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಈ ಮಧ್ಯೆ ಭಾರತ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ, ಆಫೀಸರ್ಸ್ ಯೂನಿಯನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮೊದಲಾದ ಸಂಘಟನೆಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ಇದೆ.
ಬ್ಯಾಂಕ್ ನೌಕರರ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಬಹುದು. ಹಣ ವಿತ್ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮೊದಲಾದ ನಿಮ್ಮ ಯಾವುದೇ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ.
ಇನ್ನು ಓಲಾ ಊಬರ್ ಆಟೋ ಚಾಲಕರ ಸಂಘ ಬಂದ್ ಗೆ ನೈತಿಕ ಬೆಂಬಲ ನೀಡಿವೆ. ಈಮಧ್ಯೆ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಇರಲಿದೆ. ಮಾರ್ಕೆಟ್ ಬಂದ್ ಮಾಡಲಾಗುವುದಿಲ್ಲ ಎಂದು ಕೆ.ಆರ್ ಮಾರ್ಕೆಟ್ ಅಸೋಸಿಯೇಷನ್ ಅಧ್ಯಕ್ಷ ದಿವಾಕರ್ ತಿಳಿಸಿದ್ದಾರೆ.
Key words: Changes -tomorrow’s- bank –service-barath bandh