ಚಂಡೀಗಢ,ಮಾರ್ಚ್,11,2022(www.justkannada.in): ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಹಿನ್ನೆಲೆ ಸಿಎಂ ಸ್ಥಾನಕ್ಕೆ ಚರಣ್ ಜಿತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನ ಭೇಟಿಯಾಗಿ ಸಿಎಂ ಸ್ಥಾನಕ್ಕೆ ಚರಣ್ ಜಿತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಿದರು. ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎಂಬ ಎರಡು ಕ್ಷೇತ್ರಗಳಿಂದ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಿಎಂ ಚನ್ನಿ ಎರಡೂ ಸ್ಥಾನಗಳಲ್ಲಿ ಸೋಲನುಭವಿಸಿದ್ದಾರೆ.
ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷವು 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆರಿದೆ. ಕಾಂಗ್ರೆಸ್ 18 ಸ್ಥಾನಗಳಲ್ಲಿ ಗೆದ್ದು ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದೆ. ಪಕ್ಷೇತರರೊಬ್ಬರು ಗೆದ್ದಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ಚುನಾಯಿತ ಅಭ್ಯರ್ಥಿ ಭಗವಂತ್ ಮಾನ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಚರಣ್ಜಿತ್ ಸಿಂಗ್ ಚನ್ನಿ ‘ನಾನು ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಮತ್ತು ಗೆಲುವಿಗಾಗಿ ಆಮ್ ಆದ್ಮಿ ಪಾರ್ಟಿ ಮತ್ತು ಅವರ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮಾನ್ ಜೀ ಅವರನ್ನು ಅಭಿನಂದಿಸುತ್ತೇನೆ. ಅವರು ಜನರ ನಿರೀಕ್ಷೆಯನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Key words: Charanjit Singh Channi -resigns -Punjab -cm