ಮೈಸೂರು,ಮೇ,6,2022(www.justkannada.in): ಮೈಸೂರು ಜಿಲ್ಲೆಯ ಕವಲಂದೆ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆ ಮುಗಿಸಿ ಹೊರ ಬರುವ ವೇಳೆ ಕವಲಂದೆ ಛೊಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ್ಧ ವಿಡಿಯೋ ವೈರಲ್ ಆಗಿದ್ದು ಇದೀಗ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಘೋಷಣೆಯನ್ನ ಖಂಡಿಸಿ ನಂಜನಗೂಡಿನಲ್ಲಿ ಹಿಂದೂ ಕಾರ್ಯಕರ್ತರು ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿ ಭಂಗಕ್ಕೆ ಯತ್ನಿಸಿದ ಕಿಡಿಗೇಡಿಗಳನ್ನ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಕವಲಂದೆ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಭದ್ರತೆಗಾಗಿ ಒಂದು ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ನೀಡುವಂತೆ ಕೇಳಿದ್ದೇನೆ ಎಂದರು.
Key words: Chhota Pakistan –slogan- Protest – kavalande