ಸಮಸ್ಯೆ ಬಗೆಹರಿಸದ ಕುರಿತು ವರದಿ ಕೇಳಿದ ಮುಖ್ಯಮಂತ್ರಿಗಳು
ಬೆಂಗಳೂರು, ಮೇ 31, 2023 (www.justkannada.in): ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು.
English Summary: *CM directs officers to resolve non-payment issue of Ragi Growers under MSP*
Bengaluru, May 31- Chief Minister Siddaramaiah today directed officials to resolve the problems of non-payment issues of Ragi growers under MSP scheme immediately.
He heard the grievances of Ragi growers and the farming community at his home office Krishna.
He directed the officials to fix the technical problems causing delay in payment to the farmers immediately.