ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ 

ಬೆಂಗಳೂರು,ಫೆಬ್ರವರಿ,23,2021(www.justkannada.in) :  ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯ ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ನೀಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

jk

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಣವನ್ನು ಸಿಐಡಿಯಿಂದ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಅಧಿಕಾರಿಗಳ ತರಾಟೆ ತೆಗೆದುಕೊಂಡ ಗೃಹಸಚಿವ

ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಲತಾ, ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಿಥುನ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಸ್ಪೋಟಕಗಳು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಇರಲಿಲ್ಲವೇ? ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಜರುಗುತ್ತಿರುವ ಮಾಹಿತಿಯೂ ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ನಿಮ್ಮ ನಿರ್ಲಕ್ಷ್ಯದಿಂದಲೇ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಲೇ ಇವೆ. ಯಾವುದೇ ಕಾರಣಕ್ಕೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಜಾಗರೂಕರಾಗಿಬೇಕೆಂದು ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ.

key words : Chikballapur-gelatin-explosion-Dead-families-Five lakhs-solution