ಚಿಕ್ಕಬಳ್ಳಾಪುರ,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಜಿಲೆಟಿನ್ ಸ್ಫೋಟ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸರ್ಕಾರ ಸೂಕ್ತ ತನಿಖೆ ನಡೆಸಲಿದೆ
ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಹಿರೆನಾಗವಳ್ಳಿಯಲ್ಲಿ ಜಿಲೆಟಿನ್ ಸ್ಫೋಟದಲ್ಲಿ 5 ಜನರು ಸಾವನ್ನಪ್ಪಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಅವರ ಆತ್ಮಕ್ಕೆ ಚಿರಶಾಂತಿಸಿಗಲಿ ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
key words : Chikkaballapur-Gelatine-explosion-Whoever-involved-Impeccably-Action-Minister-Murugesh Nirani