ಚಿಕ್ಕಮಗಳೂರು,ಫೆ,14,2020(www.justkannada.in): ಚಿಕ್ಕಮಗಳೂರಿನಲ್ಲಿ ಮತ್ತಿಬ್ಬರಿಗೆ ಮಂಗನ ಖಾಯಿಲೆ ಕಾಣಿಸಿಕೊಂಡಿದ್ದು ಇದೀಗ ಮಂಗನಖಾಯಿಲೆ ತಗುಲಿರುವ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮತ್ತು ಅಸ್ಸಾಂ ಮೂಲದ ಕೂಲಿ ಕಾರ್ಮಿಕರಿಗೆ ಮಂಗನಖಾಯಿಲೆ ತಗುಲಿದೆ. ಕಳೆದ ಮೂರು ದಿನಗಳ ಹಿಂದೆ ಅಸ್ಸಾಂ, ಮಧ್ಯಪ್ರದೇಶದ ಮೂವರು ಕಾರ್ಮಿಕರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿತು. ಈಗ ಈ ಸಂಖ್ಯೆ ಐದು ಜನಕ್ಕೆ ಏರಿಕೆಯಾಗಿದೆ.
ಜಿಲ್ಲಾ ಆರೋಗ್ಯ ಇಲಾಖೆ ಮಂಗನ ಖಾಯಿಲೆ ವೈರಾಣು ಪತ್ತೆ ಹಚ್ಚಿದೆ. ಸೋಂಕು ಹರಡುವ ಹಿನ್ನೆಲೆ ಜಿಲ್ಲಾ ಸರ್ವೇಕ್ಷಣಾ ಘಟಕ ಮುನ್ನೆಚ್ಚರಿಕ ಕ್ರಮಗಳನ್ನ ಕೈಗೊಂಡಿದ್ದು, ಜನರಿಗೆ ರೋಗ ನಿರೋಧಕ ಲಸಿಕೆಯನ್ನು ಹಾಕಲಾಗುತ್ತಿದೆ. ಅಷ್ಟೇ ಅಲ್ಲದೇ ಮಡಬೂರು ಸುತ್ತಮುತ್ತಲಿನ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ರೋಗ ನಿರೋಧಕ ಔಷಧಿಯನ್ನ ಸಿಂಪಡಿಸುವ ಮೂಲಕ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ.
Key words: chikkamagalore-mangana kayile-two