ಆಕ್ಷೇಪಾರ್ಹ ಪದ ಬಳಕೆ ಕೇಸ್: MLC ಸಿ.ಟಿ ರವಿಗೆ ಸಿಐಡಿ ನೋಟಿಸ್

ಬೆಂಗಳೂರು,ಜನವರಿ,9,2025 (www.justkannada.in):  ಚಳಿಗಾಲದ ಅಧಿವೇಶನದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಗ್ಗೆ  ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ  ವಿಧಾನಪರಿಷತ್ ಸದಸ್ಯ ಸಿ.ಟಿ.ರವಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಂಎಲ್ ಸಿ  ಸಿ.ಟಿ ರವಿ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ  ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎಂಎಲ್ ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಸಿ.ಟಿ.ರವಿ ಅವರನ್ನ ಬೆಳಗಾವಿ ಪೊಲೀಸರು ಬಂಧಿಸಿ ರಾತ್ರಿಯಿಡಿ ಸುತ್ತಾಡಿಸಿದ್ದ ಬಗ್ಗೆ ಚರ್ಚೆಯಾಗಿತ್ತು ನಂತರ ಸಿಟಿ ರವಿ. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

Key words: CID, notice, MLC, CT Ravi