ಬೆಂಗಳೂರು,ಡಿ,23,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾದ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ, ಮಂಗಳೂರಿನಲ್ಲಿ ಫೈರಿಂಗ್ ನಿಂದ ಇಬ್ಬರು ಸಾವು ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸುತ್ತಿದ್ದೇವೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಈ ಬಗ್ಗೆ ಪ್ರಧಾನಿ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸ್ಮಾತಕ ರೂಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲುತೂರಾಟ ನಡೆಸಿದ್ದರು. ಪರಿಸ್ಥಿತಿ ನಿಯಂತ್ರಿಸಲು ಆತ್ಮರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವೇಳೆ ಇಬ್ಬರು ಮೃತಪಟ್ಟಿದ್ದರು. ಈ ಪ್ರಕರಣವನ್ನ ತನಿಖೆಗೆ ವಹಿಸುವಂತೆ ಆಗ್ರಹ ಕೇಳಿ ಬಂದಿತ್ತು. ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಿದ್ದಾರೆ.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಇನ್ನ ಒಂದು ವಾರದ ಬಳಿಕ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
Key words: CID -probes – Mangalore-protest- death -two –case-cm bs yeddyurappa