ಮೈಸೂರು,ಅಕ್ಟೋಬರ್,17,2020(www.justkannada.in): ಮೈಸೂರು ದಸರಾ ಮಹೋತ್ಸವದ ವೇಳೆ ಮೈಸೂರು ಪ್ರವಾಸಿ ತಾಣಗಳ ಪ್ರವೇಶಕ್ಕೆ ಸಾರ್ವಜನಿಕರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವು ಮಾಡಲು ಆದೇಶಿಸಿದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪಗೆ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರಿನ ಪ್ರವಾಸಿ ತಾಣಗಳ ನಿರ್ಭಂಧ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ, ದಸರಾ ಸಂದರ್ಭದಲ್ಲಿ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿತ್ತು. ಹೀಗಾಗಿ ಕಳೆದ ರಾತ್ರಿ ಸಿಎಂಗೆ ಮನವಿ ಮಾಡಿದ್ದೆವು. ಪ್ರವಾಸೋದ್ಯಮ ನಂಬಿ ಸಾಕಷ್ಟು ಜನ ಬದುಕುತ್ತಿದ್ದಾರೆ. ದಸರಾ ಸಂದರ್ಭದಲ್ಲಿ ಒಂದಷ್ಟು ಆದಾಯದ ನಿರೀಕ್ಷೆಯಲ್ಲಿ ಇದ್ದೆವು. ಪ್ರವಾಸೋದ್ಯಮ ಚೇತರಿಕೆ ಕಾಣುವಂತಹ ಸಂದರ್ಭದಲ್ಲಿ ನಿರ್ಬಂಧ ವಿಧಿಸಿದ್ದು ಸರಿಯಲ್ಲ. ಹೀಗಾಗಿ ನಿರ್ಬಂಧ ತೆರವು ಮಾಡುವಂತೆ ಸಿಎಂಗೆ ಮನವಿ ಮಾಡಿದ್ದೆವು. ನಮ್ಮ ಮನವಿ ಸ್ಪಂದಿಸಿ, ತಕ್ಷಣ ಜಿಲ್ಲಾಧಿಕಾರಿಗಳಿಗೆ ನಿರ್ಬಂಧ ತೆರವಿಗೆ ಸಿಎಂ ಸೂಚಿಸಿದರು. ಹೀಗಾಗಿ ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇನ್ನು ನಮಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಮೈಸೂರಿನ ಎಲ್ಲಾ ಜನತೆಗೆ, ಪ್ರವಾಸಿಗರಿಗೆ ನಾಡಹಬ್ಬ ದಸರಾ ಶುಭಾಶಯಗಳು ಎಂದು ನಾರಾಯಣ್ ಗೌಡ ಶುಭಕೋರಿದರು.
Key words: Clearance – Restriction-Mysore -tourist –thanked- CM BS Yeddyurappa- Hotel Owners Association.